HomeKarnatakaBIG NEWS: ಮನವೊಲಿಕೆಗೆ ಮಣಿದ ವಿನಯ್;‌ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಿರಲು ತೀರ್ಮಾನ

BIG NEWS: ಮನವೊಲಿಕೆಗೆ ಮಣಿದ ವಿನಯ್;‌ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಿರಲು ತೀರ್ಮಾನ

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ವಿನಯ್ ಕುಮಾರ್ ಈಗ ಕಣದಿಂದ ಹಿಂದೆ ಸರಿಯಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾಗಿನೆಲೆ ಶ್ರೀಗಳ ಉಪಸ್ಥಿತಿಯಲ್ಲಿ ನಡೆದ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು, ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮುಂಬರುವ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ವಿನಯ್ ಅವರಿಗೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಚಿವ ಮಲ್ಲಿಕಾರ್ಜುನ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಎಲ್ಲರೂ ಶ್ರಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular