HomeKarnatakaಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್

ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದಿನ್ನೂರಿನಲ್ಲಿ ನಡೆದಿದೆ.

ಅರುಣ್ ಅಲಿಯಾಸ್ ಚಿನ್ನಿ (28) ಆತ್ಮಹತ್ಯೆ ಮಾಡಿಕೊಂಡಿರುವ ರೌಡಿ ಶೀಟರ್. 2019ರಲ್ಲಿ ಲೋಕನಾಥ್ ಎಂಬುವವರ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ಅರುಣ್, ಜಾಮೀನು ಪಡೆದು ಹೊರಬಂದಿದ್ದ. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಗ ರೌಡಿ ಶೀಟರ್ ಅರುಣ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular