HomeKarnatakaBREAKING NEWS: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲು

BREAKING NEWS: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ತಾಪಮಾನ ಏರಿಕೆಯಾಗುತ್ತಿದ್ದಂತೆ ಮತ್ತೊಂದೆಡೆ ಲೋಕಸಭಾ ಚುನಾವಣಾ ಕಾವು ಹೆಚ್ಚುತ್ತಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದ ಶಾಸಕ ಯತ್ನಾಳ್ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಅವರು, ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular