HomeKarnatakaನಾಳೆ 5, 8, 9ನೇ ತರಗತಿ ಫಲಿತಾಂಶ ಪ್ರಕಟ

ನಾಳೆ 5, 8, 9ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 8ರಂದು ಎಲ್ಲಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.

2023- 24 ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 11 ಮತ್ತು 12 ರಂದು ಹಾಗೂ ಮಾ. 25 ರಿಂದ 28 ರ ವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿತ್ತು.

ಏಪ್ರಿಲ್ 2 ರೊಳಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಶಾಲೆಗಳಿಗೆ ಉತ್ತರ ಪತ್ರಿಕೆಗಳನ್ನು ಕಳುಹಿಸುವಂತೆ ಸೂಚನೆ ನೀಡಲಾಗಿತ್ತು. ಏಪ್ರಿಲ್ 8ರಂದು ಸಮುದಾಯದತ್ತ ಶಾಲಾ ದಿನದಂದು ಫಲಿತಾಂಶ ಪ್ರಕಟಿಸಬೇಕು. ವಿಳಂಬ ಮಾಡದೆ ಫಲಿತಾಂಶ ಪ್ರಕಟಿಸುವಂತೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular