HomeKarnatakaಅತಿಥಿ ಉಪನ್ಯಾಸಕರ ಗೌರವಧನ ಪರಿಷ್ಕರಣೆ: ಮಾಹಿತಿ ನೀಡಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಅತಿಥಿ ಉಪನ್ಯಾಸಕರ ಗೌರವಧನ ಪರಿಷ್ಕರಣೆ: ಮಾಹಿತಿ ನೀಡಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಮಾಹಿತಿ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

2023 -24ನೇ ಸಾಲಿನಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ ನೇಮಕವಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಈಗಾಗಲೇ ಫೆಬ್ರವರಿವರೆಗೆ ಗೌರವ ಧನ ಬಿಡುಗಡೆ ಮಾಡಲಾಗಿದೆ. ಸೇವಾವಧಿ ಆಧಾರದಲ್ಲಿ ಗೌರವಧನ ಪರಿಷ್ಕರಣೆ ಮಾಡಬೇಕಿದೆ. 2024ರ ಜನವರಿಯಿಂದಲೇ ವ್ಯತ್ಯಾಸವಾದ ಗೌರವಧನ ಸರಿಪಡಿಸಬೇಕಿರುವ ಕಾರಣ ಅತಿಥಿ ಉಪನ್ಯಾಸಕರ ಮಾಹಿತಿಯನ್ನು ಗೂಗಲ್ ಫಾರಂನಲ್ಲಿ ಅಪ್ಲೋಡ್ ಮಾಡಬೇಕು ಮತ್ತು ಇ-ಮೇಲ್  [email protected] ಗೆ ಕಳುಹಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular