HomeKarnatakaರಾಜ್ಯದಲ್ಲಿ ಮುಂದಿನ ಒಂದು ವಾರ ಉಷ್ಣ ಅಲೆಯ ಜತೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಒಂದು ವಾರ ಉಷ್ಣ ಅಲೆಯ ಜತೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಉಷ್ಣ ಅಲೆಯ ಜೊತೆಗೆ ಸಾಧಾರಣ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 8ರಂದು ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕಲಬುರಗಿ, ಗದಗ, ರಾಯಚೂರು, ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರಲಿದೆ. ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಬೀದರ್, ಚಿಕ್ಕಮಗಳೂರು, ಯಾದಗಿರಿ, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 10ರಂದು ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಂಭವ ಇದೆ.

ಏಪ್ರಿಲ್ 11ರಂದು ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ.

ಏಪ್ರಿಲ್ 12ರಂದು ಉಡುಪಿ, ದಕ್ಷಿಣ ಕನ್ನಡ, ಕಲಬುರಗಿ, ಗದಗ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular