HomeKarnatakaBIG NEWS: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹತ್ಯೆ

BIG NEWS: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹತ್ಯೆ

ಯಾದಗಿರಿ: ಹಾಡ ಹಗಲೇ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ.

ಏವೂರು ಗ್ರಾಮದ ನಿವಾಸಿ ಬಂದೇನವಾಜ್ (40) ಕೊಲೆಯದ ವ್ಯಕ್ತಿ. ಬಹಿರ್ದೆಸೆಗೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಬಂದೇನವಾಜ್ ನನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ ಪಿ ಜಿ.ಸಂಗೀತಾ ಭೇಟಿ ನೀಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular