ಬೆಂಗಳೂರು : ಏ.14 ಕ್ಕೆ ಕರ್ನಾಟಕಕ್ಕೆ ಮತ್ತೆ ಪ್ರಧಾನಿ ಮೋದಿ ಎಂಟ್ರಿ ಕೊಡಲಿದ್ದು, ರಾಜ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಇದೀಗ ಬಂದ ಮಾಹಿತಿ ಪ್ರಕಾರ ಪ್ರಧಾನಿ ಮೋದಿ ಚುನಾವಣಾ ಪ್ರಚಾರ ಸಮಾವೇಶ ಬೆಂಗಳೂರಿನಿಂದ ಮಂಗಳೂರಿಗೆ ಶಿಫ್ಟ್ ಆಗಿದೆ.
ಏಪ್ರಿಲ್ 14ರಂದು ಮಂಗಳೂರಿನಲ್ಲಿ ಸಮಾವೇಶ ನಡೆಸಲಿರುವ ಪ್ರಧಾನಿ ಮೋದಿ ನಂತರ ಸಂಜೆ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಮೊದಲು ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಸಮಾವೇಶ ಇದೀಗ ಮಂಗಳೂರಿಗೆ ಶಿಫ್ಟ್ ಆಗಿದೆ. ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿಈ ಸಮಾವೇಶ ನಡೆಯಲಿದೆ.
ಸಂಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ಸುಮಾರು 10 ಕಿ.ಮೀ ದೂರ ರೋಡ್ ಶೋ ನಡೆಸುವ ಸಾಧ್ಯತೆ ಇದೆ.ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.