ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಂಸದ ವೀರಪ್ಪ ಮೊಯ್ಲಿ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಲೋಕಸಭೆ ಚುನಾವಣೆ ಹೊತ್ತಲ್ಲೇ ಚುನಾವಣಾ ರಾಜಕೀಯಕ್ಕೆ ಮಾಜಿ ಸಂಸದ ವೀರಪ್ಪ ಮೊಯ್ಲಿ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಫೈಟ್ ಶುರುವಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಮಾಜಿ ಸಂಸದ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ನಡುವೆ ಪೈಪೋಟಿ ತೀವ್ರಗೊಂಡಿತ್ತು.
ನನಗೆ ಟಿಕೆಟ್ ನೀಡಬೇಕೆಂದು ಕೈ ನಾಯಕರು ಮನವಿ ಮಾಡಿದ್ದರು. ಆದರೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಮನವಿ ಮಾಡಿತ್ತು, ಹೈಕಮಾಂಡ್ ಮಾತಿಗೆ ಗೌರವ ಕೊಟ್ಟು ನಾನು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ, ರಕ್ಷಾ ರಾಮಯ್ಯಗೆ ಅವರಿಗೆ ಬೆಂಬಲ ನೀಡುತ್ತೇನೆ. ನನ್ನ ಬೆಂಬಲಿಗರೂ ರಕ್ಷಾ ರಾಮಯ್ಯಗೆ ಅವರಿಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.