ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ವರ್ಷಾಂತ್ಯಕ್ಕೆ ಜರುಗಿದ್ದ ‘ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಇದೀಗ ಇಂದು ಸೋಮವಾರ ಏಪ್ರಿಲ್ 8ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಕೆಸೆಟ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಂತಿಮ ಉತ್ತರಗಳನ್ನು ವೀಕ್ಷಿಸಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ಜಾಲತಾಣಕ್ಕೆ https://cetonline.karnataka.gov.in/kea/ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಈ ರೀತಿ ಕೀ ಉತ್ತರ ಚೆಕ್ ಮಾಡಿ
1) ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ಗೆ https://cetonline.karnataka.gov.in/kea/ ಭೇಟಿ ನೀಡಬೇಕು.
2) ಜಾಲತಾಣದ ಮುಖಪುದಲ್ಲಿ ನೀಡಲಾದ ಲಿಂಕ್ ಅನ್ನು ಆಯ್ಕೆ ಮಾಡಿಕೊಳ್ಳಿ.
3) KSET 2023 ಅಂತಿಮ ಉತ್ತರ ಕೀ’ ಮೇಲೆ ಕ್ಲಿಕ್ ಮಾಡಿ
ಕರ್ನಾಟಕ ವಿಶ್ವವಿದ್ಯಾಲಯಗಳಿಗೆ ಸಹಾಯಕ ಪ್ರಾಧ್ಯಾಪಕರನ್ನು ನಿಯೋಜನೆ ಮಾಡಿಕೊಳ್ಳುವ ಉದ್ದೇಶದಿಂದ ಸರ್ಕಾರ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ನಡೆಸಿತ್ತು.