ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನ 19 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಮಾಧವನಗರದಲ್ಲಿ ನಡೆದಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ..ಅಥವಾ ಆಕಸ್ಮಾತ್ ಆಗಿ ಬಿದ್ದಿದ್ದಾನೆಯೋ ಎಂಬುದು ಗೊತ್ತಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.