HomeEntertainmentಅಂತ್ಯವಾಯ್ತು ಮತ್ತೊಂದು ಸಿನಿ ಜೋಡಿ 18 ವರ್ಷದ ದಾಂಪತ್ಯ: ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ...

ಅಂತ್ಯವಾಯ್ತು ಮತ್ತೊಂದು ಸಿನಿ ಜೋಡಿ 18 ವರ್ಷದ ದಾಂಪತ್ಯ: ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಖ್ಯಾತ ನಟ ಧನುಷ್, ಐಶ್ವರ್ಯಾ ರಜನಿಕಾಂತ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಮತ್ತು ನಟ ಧನುಷ್ ವಿವಾಹವಾದ 18 ವರ್ಷಗಳ ನಂತರ ಚೆನ್ನೈನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನದ ಸೆಕ್ಷನ್ 13 ಬಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಧನುಷ್ ಮತ್ತು ಐಶ್ವರ್ಯಾ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಜನವರಿ 2022 ರಲ್ಲಿ ಐಶ್ವರ್ಯಾ ಮತ್ತು ಧನುಷ್ ತಮ್ಮ ಪ್ರತ್ಯೇಕತೆ ಬಗ್ಗೆ ಘೋಷಿಸಿದ್ದರು.

18 ವರ್ಷಗಳ ಕಾಲ ಸ್ನೇಹಿತರು, ದಂಪತಿಗಳು, ಪೋಷಕರು ಮತ್ತು ಪರಸ್ಪರ ಹಿತೈಷಿಗಳಾಗಿ ಒಟ್ಟಿಗೆ ಇದ್ದೇವೆ. ಪ್ರಯಾಣವು ಬೆಳವಣಿಗೆ, ತಿಳಿವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಾಗಿದೆ. ಇಂದು ನಾವು ನಮ್ಮ ಮಾರ್ಗಗಳು ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ. ಐಶ್ವರ್ಯಾ ಮತ್ತು ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ ಎಂದು ಧನುಷ್ 2022 ರಲ್ಲಿ ತಿಳಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2004 ರಲ್ಲಿ ಐಶ್ವರ್ಯಾ ಮತ್ತು ಧನುಷ್ ಮದುವೆ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿತ್ತು. 2006 ರಲ್ಲಿ ಅವರು ತಮ್ಮ ಮೊದಲ ಮಗು ಯಾತ್ರಾ, 2010ರಲ್ಲಿ ಎರಡನೇ ಲಿಂಗ ಅವರಿಗೆ ಪೋಷಕರಾದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular