HomeKarnatakaಸಿಎಂ, ಸ್ವಾಮೀಜಿ ಸಂಧಾನದ ನಂತರವೂ ಪಕ್ಷೇತರ ಸ್ಪರ್ಧೆ ಘೋಷಿಸಿದ ವಿನಯ್ ಕುಮಾರ್: ಕಾಂಗ್ರೆಸ್ ಗೆ ಬಂಡಾಯದ...

ಸಿಎಂ, ಸ್ವಾಮೀಜಿ ಸಂಧಾನದ ನಂತರವೂ ಪಕ್ಷೇತರ ಸ್ಪರ್ಧೆ ಘೋಷಿಸಿದ ವಿನಯ್ ಕುಮಾರ್: ಕಾಂಗ್ರೆಸ್ ಗೆ ಬಂಡಾಯದ ಬಿಸಿ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಇನ್ ಸೈಟ್ಸ್ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೂಡ ಇದ್ದರು. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುವಂತೆ ವಿನಯ್ ಕುಮಾರ್ ಅವರಿಗೆ ತಿಳಿಸಲಾಗಿತ್ತು. ಈ ವೇಳೆ ತೀರ್ಮಾನ ಕೈಗೊಳ್ಳಲು ಎರಡು ದಿನಗಳ ಕಾಲಾವಕಾಶ ಕೋರಿದ ವಿನಯ್ ಕುಮಾರ್ ಸೋಮವಾರ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದಾರೆ,

ಸಿದ್ದರಾಮಯ್ಯ ನನ್ನ ಮೇಲಿನ ವೈಯಕ್ತಿಕ ಕಾಳಜಿಯಿಂದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ತಿಳಿಸಿದ್ದಾರೆ. ಆದರೆ, ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ನಿರ್ಧಾರ ಪ್ರಕಟಿಸಿದ್ದಾರೆ. ಈ ಮೂಲಕ ವಿನಯ್ ಕುಮಾರ್ ಕಾಂಗ್ರೆಸ್ ಗೆ ದಾವಣಗೆರೆಯಲ್ಲಿ ಬಿಸಿ ತುಪ್ಪವಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular