HomeIndiaದೇಶದ ಜನತೆಗೆ ಪ್ರಧಾನಿ ಮೋದಿ ಯುಗಾದಿ ಶುಭಾಶಯ: ಹೊಸ ವರ್ಷವು ಎಲ್ಲರಿಗೂ ಸಂತೋಷ, ಸಮೃದ್ಧಿ ತರಲಿ...

ದೇಶದ ಜನತೆಗೆ ಪ್ರಧಾನಿ ಮೋದಿ ಯುಗಾದಿ ಶುಭಾಶಯ: ಹೊಸ ವರ್ಷವು ಎಲ್ಲರಿಗೂ ಸಂತೋಷ, ಸಮೃದ್ಧಿ ತರಲಿ ಎಂದು ಕನ್ನಡದಲ್ಲೇ ಹಾರೈಕೆ

ನವದೆಹಲಿ: ದೇಶದ ಜನೆತೆಗ ಪ್ರಧಾನಿ ಮೋದಿ ಅವರು ಯುಗಾದಿ ಮತ್ತು ಚೈತ್ರ ನವರಾತ್ರಿ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, “ದೇಶಾದ್ಯಂತ ಇರುವ ನನ್ನ ಕುಟುಂಬ ಸದಸ್ಯರಿಗೆ ಹೊಸ ವರ್ಷದ ಶುಭಾಶಯಗಳು. ಈ ಹೊಸ ವರ್ಷವು ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಆರೋಗ್ಯದಿಂದ ತುಂಬಲಿ ಎಂದು ನಾನು ಬಯಸುತ್ತೇನೆ.” ಎಂದು ತಿಳಿಸಿದ್ದಾರೆ.

“ದೇಶದಲ್ಲಿರುವ ನನ್ನ ಎಲ್ಲಾ ಕುಟುಂಬ ಸದಸ್ಯರಿಗೆ ನಾನು ನವರಾತ್ರಿಯ ಶುಭಾಶಯಗಳನ್ನು ಕೋರುತ್ತೇನೆ. ಶಕ್ತಿಯ ಆರಾಧನೆಯ ಈ ಮಹಾನ್ ಹಬ್ಬವು ಎಲ್ಲರಿಗೂ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ. ಜೈ ಮಾತಾ ದಿ!” ಎಂದು ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular