
‘ಬನಾರಸ್’ ಚಿತ್ರದ ಸೋಲಿನ ಬಳಿಕ ಇದೀಗ ಜಮೀರ್ ಖಾನ್ ಪುತ್ರ ಝೈದ್ ಖಾನ್ ಮತ್ತೊಂದು ಲವ್ ಸ್ಟೋರಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಇದರ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆ ಮಾಡಲಾಗಿದ್ದು, ‘ಕಲ್ಟ್’ ಎಂಬ ಶೀರ್ಷಿಕೆ ಇಡಲಾಗಿದೆ.
ಅನಿಲ್ ಕುಮಾರ್ ರಚಿಸಿ ನಿರ್ದೇಶಿಸಿರುವ ಈ ಚಿತ್ರವನ್ನು ಅಶ್ರಿತ್ ಸಿನಿಮಾಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಲಿದ್ದು, ಕೆ ಎಂ ಪ್ರಕಾಶ್ ಸಂಕಲನ, ರಘು ವರ್ಮ ಸಾಹಸ ನಿರ್ದೇಶನವಿದೆ. ಇನ್ನೇನು ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭಿಸುವುದಾಗಿ ಚಿತ್ರತಂಡ ಮಾಧ್ಯಮ ಒಂದರಲ್ಲಿ ತಿಳಿಸಿದೆ.
