ಬೆಂಗಳೂರು : ರಾಜ್ಯ ಸರ್ಕಾರದ ಭೂಮಾಪನ, ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 364 ಭೂಮಾಪಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಗಳನ್ನು ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏ.10 ಇಂದು ಕೊನೆಯ ದಿನಾಂಕವಾಗಿದೆ.
ಗ್ರೂಪ್ ಸಿ ಉಳಿಕೆ ಮೂಲ ವೃಂದದ 264 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ 100 ಹುದ್ದೆಗಳನೇಮಕಾತಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗಿದೆ. ಮಾ.11ರಿಂದ ಏ.10ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
https://kpsconline.karnataka.gov.in ಗೆ ಭೇಟಿ ನೀಡಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು 12ನೇ ದರ್ಜೆಯ ಡಿಪ್ಲೊಮಾ ಮತ್ತು ಬಿ.ಇ. ಅಥವಾ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪಡೆದಿರಬೇಕು.
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆಯಲ್ಲಿ, 10 ಏಪ್ರಿಲ್ 2024 ರಂತೆ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಮತ್ತು 35 ಕ್ಕಿಂತ ಹೆಚ್ಚಿರಬಾರದು ಎಂದು ಹೇಳುತ್ತದೆ.
ಕನಿಷ್ಠ ವಯಸ್ಸು: 18 ವರ್ಷಗಳು – ಗರಿಷ್ಠ ವಯಸ್ಸು: 35 ವರ್ಷಗಳು
ವಯೋಮಿತಿ ಸಡಿಲಿಕೆ ವಿವರ ಹೀಗಿದೆ: Cat-2A/2B/3A/3B ಅಭ್ಯರ್ಥಿಗಳಿಗೆ: 03 ವರ್ಷಗಳು SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷಗಳು
ಸಂಬಳ
ಲ್ಯಾಂಡ್ ಸರ್ವೇಯರ್ (HK) ಮತ್ತು ಲ್ಯಾಂಡ್ ಸರ್ವೇಯರ್ (RPC) – 23,500 – 47,650/- ರೂಪಾಯಿ ಪ್ರತಿ ತಿಂಗಳು