HomeAutoಕಾರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಸಾವು

ಕಾರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಸಾವು

ಚಿಕ್ಕಮಗಳೂರು: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಕಡೂರು ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ(44) ಮೃತಪಟ್ಟವರು ಎಂದು ಹೇಳಲಾಗಿದೆ. ಕಡೂರು ತಾಲೂಕಿನ ತಂಗಲಿ ಅಂಡರ್ ಪಾಸ್ ಬಳಿ ಅಪಘಾತ ಸಂಭವಿಸಿದ್ದು, ಮಲ್ಲಿಕಾರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಮಲ್ಲಿಕಾರ್ಜುನ ಅವರು ಕಡೂರು ತಾಲೂಕಿನ ಚೆಟ್ಟನಹಳ್ಳಿ ನಿವಾಸಿಯಾಗಿದ್ದಾರೆ. ಸ್ಥಳ ಮಹಜರು ಮಾಡಲು ಅಂಚೆಚೋಮನಹಳ್ಳಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular