
ಚೆನ್ನೈ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ತಮಿಳುನಾಡಿನ ವಿವಿಧೆಡೆ ಪ್ರಧಾನಿ ಮೋದಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮಿಳುನಾಡಿನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಕೊಯಮತ್ತೂರು ಜಿಲ್ಲೆಯ ವೆಲ್ಲೂರು ಮತ್ತು ಮೆಟ್ಟುಪಾಳ್ಯಂನಲ್ಲಿ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ. ಮೋದಿ ಮಂಗಳವಾರ ರೋಡ್‌ಶೋ ನಡೆಸಿ ಅಭ್ಯರ್ಥಿಗಳ ಪರ ಮತ ಯಾಚಿಸಿದ್ದಾರೆ.
ಬುಧವಾರದ ವೇಳಾಪಟ್ಟಿ
ಪ್ರಧಾನಿ ಮೋದಿ ಅವರು ಹೆಲಿಕಾಪ್ಟರ್‌ನಲ್ಲಿ ವೆಲ್ಲೂರಿಗೆ ಪ್ರಯಾಣಿಸುವ ಮೂಲಕ ತಮ್ಮ ಪ್ರಚಾರ ಪ್ರಾರಂಭಿಸಲಿದ್ದಾರೆ. ಬೆಳಿಗ್ಗೆ 10:15 ರ ಸುಮಾರಿಗೆ ವೆಲ್ಲೂರ್ ಫೋರ್ಟ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಅವರು ರಸ್ತೆ ಮೂಲಕ ಅರ್ಕೋನಾಂಗೆ ತೆರಳುತ್ತಾರೆ. ಮಧ್ಯಾಹ್ನ 1.10 ರ ಸುಮಾರಿಗೆ ಕೊಯಮತ್ತೂರು ತಲುಪುತ್ತಾರೆ. ಮೆಟ್ಟುಪಾಳ್ಯಂನಲ್ಲಿ ಮತ್ತೊಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ಪ್ರಚಾರ ತೀವ್ರ
ತಮಿಳುನಾಡಿನಲ್ಲಿ ಬಿಜೆಪಿ ತನ್ನ ಪ್ರಚಾರ ಕಾರ್ಯಗಳನ್ನು ಹೆಚ್ಚಿಸಿದ್ದು, ರಾಜ್ಯದಾದ್ಯಂತ ಸಾರ್ವಜನಿಕ ರ್ಯಾಲಿಗಳಲ್ಲಿ ಉನ್ನತ ನಾಯಕರು ಭಾಗವಹಿಸುತ್ತಿದ್ದಾರೆ. ಇತ್ತೀಚೆಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಿರುಚಿರಾಪಳ್ಳಿಯಲ್ಲಿ ರೋಡ್‌ಶೋ ನಡೆಸಿದರು.