ಬೆಂಗಳೂರು : ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆ ನಾಳೆ 11:04:2024 ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: 11.04.2024 ರಂದು ಖುತುಬ್-ಎ-ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯದಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ಮುಂದುವರೆದು, ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಖುತುಬ್-ಎ-ರಂಜಾನ್ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ದಿನಾಂಕ: 11.04.2024ರ ಬದಲಿಗೆ ದಿನಾಂಕ: 10.04.2024ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.