HomeKarnatakaBREAKING : 'ದ್ವಿತೀಯ PUC' ಪರೀಕ್ಷೆ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ.!

BREAKING : ‘ದ್ವಿತೀಯ PUC’ ಪರೀಕ್ಷೆ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ.!

ಬೆಂಗಳೂರು : 2024 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಶಿಕ್ಷಣ ಇಲಾಖೆ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ರಾಜ್ಯದ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕ ಗಳಿಸಿದರೆ ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ. ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾವಾರು ಫಲಿತಾಂಶ

ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಶೇ.97.37 ಫಲಿತಾಂಶ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನದಲ್ಲಿ ಶೇ.96.80 ಫಲಿತಾಂಶ ಗಳಿಸಿದೆ. ಮೂರನೇ ಹಾಗೂ ನಾಲ್ಕನೇ ಸ್ಥಾನಗಳಲ್ಲಿ ವಿಜಯಪುರ (ಶೇ.94.89) ಹಾಗೂ ಉತ್ತರ ಕನ್ನಡ (ಶೇ.92.51) ಇವೆ. ಕೊನೆಯ ಸ್ಥಾನದಲ್ಲಿ ಗದಗ (ಶೇ.72.86) ಪಡೆದಿದೆ. ಬೆಂಗಳೂರು ಉತ್ತರ ಶೇ.88.67 ಹಾಗೂ ಬೆಂಗಳೂರು ದಕ್ಷಿಣ ಶೇ.89.57 ಫಲಿತಾಂಶ ದಾಖಲಿಸಿವೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ..?

1) ಮೊದಲು https://karresults.nic.in/ ಭೇಟಿ ನೀಡಿ
2) ನಂತರ ದ್ವಿತೀಯ ಪಿಯುಸಿ ರಿಸಲ್ಟ್ ಚೆಕ್ ಮಾಡಲಯ ಲಿಂಕ್ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ 3ರಿಜಿಸ್ಟರ್ ನಂಬರ್ ಹಾಕಿ ಚೆಕ್ ಮಾಡಿಕೊಳ್ಳಿ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಕನಿಷ್ಠ ಶೇಕಡ.35 ಅಂಕಗಳನ್ನು ಗಳಿಸಿದರೆ ಉತ್ತೀರ್ಣರಾಗಬಹುದು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular