HomeKarnatakaBREAKING NEWS: ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

BREAKING NEWS: ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ರಾಮನಗರ: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ರಾಜಕೀಯ ನಾಯಕರು, ಅಭ್ಯರ್ಥಿಗಳ ಮೇಲೆ ಹೆಚ್ಚಿನ ನಿಗಾ ವಹಿಸಿದ್ದಾರೆ.

ಈ ಮಧ್ಯೆ ಮಾಜಿ ಸಿಎಂ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ಕೇತಗಾನಹಳ್ಳಿಯ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್.ಡಿ.ಕೆ ತೋಟದ ಮನೆಯಲ್ಲಿ ಅತಿಥಿಗಳಿಗೆ ಭೋಜನ ಕೂಟ, ಸತ್ಕಾರ ಆಯೋಜನೆ ,ಆಡಿರುವ ಹಿನ್ನೆಲೆಯಲ್ಲಿ ಚುನವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular