ಬೆಂಗಳೂರು : ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಶಿವಾಜಿನಗರದಲ್ಲಿ ನಡೆದಿದೆ.
ಮೃತನನ್ನು ಕಮಲೇಶ್ (18) ಎಂದು ಗುರುತಿಸಲಾಗಿದೆ. ಸ್ನೇಹಿತನನ್ನು ಮಾತನಾಡಿಸಲು ಕಮಲೇಶ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಅವಘಡ ನಡೆದಿದೆ. ಬಿಎಂಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಡಿಕ್ಕಿ ಹೊಡೆದು ಸವಾರ ಕಮಲೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿವಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.