
ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತ್ಯೇಕ ಕನ್ನಡ ಖಾತೆ ಆರಂಭಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಹೊಸ ಎಕ್ಸ್ (ಟ್ವಿಟರ್) ಖಾತೆ ತೆರೆದಿರುವ ಪ್ರಧಾನಿ ಮೋದಿ ಕನ್ನಡಿಗರ ಗಮನ ಸೆಳೆದಿದ್ದಾರೆ. ’ನಮೋ ಕನ್ನಡ’ ಎಂಬ ಹೆಸರಿನಲ್ಲಿ ನರೇಂದ್ರ ಮೋದಿ ಅವರ ಕನ್ನಡ ಖಾತೆ ಆರಂಭವಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಮತದಾರರನ್ನು ತಲುಪುವ ನಿಟ್ಟಿನಲ್ಲಿ ಹಾಗೂ ಪ್ರಧಾನಿ ಮೋದಿ ಅವರ ಭಾಷಣದ , ನೀಡುವ ಮಾಹಿತಿಗಳನ್ನು ಜನತೆಗೆ ತಲುಪಿಸುವ ಉದ್ದೇಶದಿಂದ ಕನ್ನಡದಲ್ಲಿ ಎಕ್ಸ್ ಖಾತೆ ತೆರೆಯಲಾಗಿದೆ.