ಹಿಂದೂಗಳ ವೋಟ್ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್ ವೈರಲ್: ಪ್ರಕರಣ ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಹೇಳಿರುವಂತೆ ನಕಲಿ ವರದಿಯ ಪೋಸ್ಟ್ ವೈರಲ್ ಆಗಿದ್ದು, ಚಿಕ್ಕಮಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ಮತ ನಮಗೆ ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಮರ ಓಲೈಕೆ ಕುರಿತು ಬಿಜೆಪಿಯವರ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಮುಸ್ಲಿಮರ ಪರ ಸಿಎಂ ಹೇಳಿಕೆ ನೀಡಿರುವ ರೀತಿ ಅಪಪ್ರಚಾರ ನಡೆಸಲಾಗಿದೆ.

ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದಂತೆ ಕ್ರಿಯೇಟ್ ಮಾಡಿ ಪೋಸ್ಟ್ ಮಾಡಲಾಗಿದೆ. ನಕಲಿ ಪೋಸ್ಟ್ ವೈರಲ್ ಮಾಡಿ ಸಿಎಂ ವಿರುದ್ಧ ಅಪಪ್ರಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಕ್ರಮಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದಿಂದ ದೂರು ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read