ಕಾಂಗ್ರೆಸ್ ಇಲ್ಲಿ 18 ಸ್ಥಾನ ಗೆದ್ದರೆ ಜಗತ್ತಿನ 8ನೇ ಅದ್ಭುತ, ಫಲಿತಾಂಶದ ಬಳಿಕ ಕಾಂಗ್ರೆಸ್ ಧೂಳೀಪಟ: ವಿಜಯೇಂದ್ರ

ಹಾವೇರಿ: ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಹಾವೇರಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಗೆಲ್ಲುವುದು ಅಷ್ಟೇ ಸತ್ಯ. ಮೂರು ಲಕ್ಷ ಮತಗಳ ಅಂತರದಲ್ಲಿ ಬಸವರಾಜ ಬೊಮ್ಮಾಯಿ ಜಯಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಬದುಕಿದ್ದಾಗಲೇ ಕಾಂಗ್ರೆಸ್ ನವರು ಕಗ್ಗೊಲೆ ಮಾಡಿದವರು. ಎರಡು ಬಾರಿ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನವರು ಸೋಲಿಸಿದ್ದಾರೆ. ಮೋದಿ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ. ಒಂದು ದಿನವೂ ರಜೆ ತೆಗೆದುಕೊಳ್ಳದೆ ಮೋದಿ ಕೆಲಸ ಮಾಡಿದ್ದಾರೆ. ಎರಡು ಜಾತಿ, ಪಕ್ಷಗಳ ನಡುವೆ ನಡೆಯುತ್ತಿರುವ ಚುನಾವಣೆ ಇದಲ್ಲ ಭಾರತದ ಭವಿಷ್ಯ ರೂಪಿಸುವ ಚುನಾವಣೆ ಇದಾಗಿದೆ ಎಂದರು.

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಧೂಳಿಪಟ ಆಗಲಿದೆ. ಮೋದಿ ಕೊಟ್ಟ ಅಕ್ಕಿ ಚೀಲಕ್ಕೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಕಳೆದ ಒಂಬತ್ತು ತಿಂಗಳಿನಿಂದ ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು? 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಮುಖ್ಯಮಂತ್ರಿಗಳಿಗೆ ಕರುಣೆ ಇಲ್ಲ. ಮಹಿಳೆಯರ ಬಗ್ಗೆ ಮುಖ್ಯಮಂತ್ರಿಗಳು ಮೊಸಳೆ ಕಣ್ಣೀರು ಸುರಿಸುತ್ತಾರೆ. ದಲಿತರಿಗೆ ಮೀಸಲಿಟ್ಟ ಹಣ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 18 ಸ್ಥಾನ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಇಲ್ಲಿ 18 ಸ್ಥಾನ ಗೆದ್ದರೆ ಅದು ಜಗತ್ತಿನ ಎಂಟನೇ ಅದ್ಭುತ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read