HomeKarnatakaಮನುಷ್ಯರ ಜೀವಕ್ಕೆ ಅಪಾಯಕಾರಿ 23 ತಳಿಗಳ ನಾಯಿ ಸಾಕಣೆ ನಿಷೇಧ ಸುತ್ತೋಲೆ ರದ್ದು: ಹೈಕೋರ್ಟ್ ಆದೇಶ

ಮನುಷ್ಯರ ಜೀವಕ್ಕೆ ಅಪಾಯಕಾರಿ 23 ತಳಿಗಳ ನಾಯಿ ಸಾಕಣೆ ನಿಷೇಧ ಸುತ್ತೋಲೆ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮನುಷ್ಯರ ಜೀವಕ್ಕೆ ಅಪಾಯಕಾರಿ ಮತ್ತು ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕಣೆ ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ.

ಕೇಂದ್ರ ಸರ್ಕಾರದ ಸುತ್ತೋಲೆ ಪ್ರಶ್ನಿಸಿ ಶ್ವಾನ ತರಬೇತುದಾರ ಕಿಂಗ್ ಸಾಲ್ಮನ್ ಡೇವಿಡ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.

ತಜ್ಞರು ಸೇರಿದಂತೆ ಸಂಬಂಧಿಸಿದವರೊಂದಿಗೆ ಸಮಾಲೋಚನೆ ನಡೆಸಿ ಕೇಂದ್ರ ಸರ್ಕಾರ ಹೊಸ ಸುತ್ತೋಲೆ ಹೊರಡಿಸಬಹುದಾಗಿದೆ. ಶ್ವಾನ ತಳಿ ಪ್ರಮಾಣೀಕರಿಸುವ ಸಂಸ್ಥೆಗಳು ಮತ್ತು ಪ್ರಾಣಿಗಳ ಸಂಘಟನೆಗಳನ್ನು ಸರ್ಕಾರ ಕಡ್ಡಾಯವಾಗಿ ಆಲಿಸಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಟಾಫೋರ್ಡ್ ಶೇರ್ ಟೆರಿಯರ್, ಫಿಲಾ ಬ್ರೆಸಿಲ್ಟೆರೋ, ಅಮೆರಿಕನ್ ಬುಲ್ ಡಾಗ್, ಪಿಟ್ ಬುಲ್ ಟೆರಿಯರ್, ಟೋಸ ಇನು ಮೊದಲಾದ ಮನುಷ್ಯರ ಜೀವಕ್ಕೆ ಅಪಾಯಕಾರಿ ಮತ್ತು ಮಾರಕವಾದ 23 ಶ್ವಾನ ತಳಿ ಸಾಕುವಿಕೆ ನಿಷೇಧಿಸುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿ 2024ರ ಮಾರ್ಚ್ 12ರಂದು ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular