ಬೀದರ್: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲಿಗೆಗೆ ಇಡೀ ಅಂಗಡಿ ಹೊತ್ತಿ ಉರಿದಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ. ಬೀದರ್ ನ ಮೋಹನ್ ಮಾರುಕಟ್ಟೆ ಬಳಿಯ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ.
ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸುಮಾರು 50 ಲಕ್ಷಕ್ಕೂ ಹೆಚ್ಚು ವಸ್ತುಗಳು ಭಸ್ಮವಾಗಿವೆ. ಶಿವಕುಮಾರ್ ಹಾಗೂ ಪ್ರಕಾಶ್ ಬಿರಾದಾರ್ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.