ಬೆಂಗಳೂರು : ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದು, ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.
ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ, ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.