HomeKarnatakaBIG NEWS: ಲೈಸನ್ಸ್ ನಿಯಮ ಉಲ್ಲಂಘನೆ; ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

BIG NEWS: ಲೈಸನ್ಸ್ ನಿಯಮ ಉಲ್ಲಂಘನೆ; ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಆದಾಗ್ಯೂ ಲೈಸನ್ಸ್ ನಿಯಮ ಉಲ್ಲಂಘಿಸಿ ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಎಸ್ ಎಸ್ ಟಿ ಅಧಿಕಾರಿ ತಿಲಕ್ ಕುಮಾರ್ ಹೆಗಡೆ ನೇತೃತ್ವದಲ್ಲಿ ನೆಲಮಂಗಲ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕೊಡಗು ಮೂಲದ ಎ.ಪಿ.ರತನ್ ಎಂಬುವವರ ಬಳಿ ಗನ್ ಪತ್ತೆಯಾಗಿದೆ.

ಬೆಂಗಳೂರಿನಿಂದ ಕೊಡಗಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗನ್ ಸಮೇತ ಸಿಕ್ಕಿ ಬಿದ್ದಿದ್ದು, ನೆಲಮಂಗಲ ಠಾಣೆ ಪೊಲೀಸರು ರತನ್ ನನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular