ಲೋಕಸಭೆ ಚುನಾವಣೆ ಹಿನ್ನೆಲೆ ಬೀದರ್ ಜಿಲ್ಲೆಯಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇನ್ನಿತರೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಾರಾಷ್ಟ್ರದ ಮತದಾರರಿಗೆ ಏಪ್ರಿಲ್ 26ರಂದು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದ್ದು, ಮಹಾರಾಷ್ಟ್ರ ರಾಜ್ಯದ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು ದಿನಾಂಕ:26.04.2004ರ ಶುಕ್ರವಾರದಂದು ಮತದಾನ ನಡೆಯಲಿದೆ. ಮಹಾರಾಷ್ಟ್ರ ರಾಜ್ಯವು ಕರ್ನಾಟಕ ರಾಜ್ಯದ ನೆರೆ ರಾಜ್ಯವಾಗಿರುವುದರಿಂದ ಮಹಾರಾಷ್ಟ್ರ, ರಾಜ್ಯದಲ್ಲಿ ಮತದಾರರಾಗಿರುವವರು ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಧ್ಯತೆ ಇರುವುದರಿಂದ ಅಂತಹ ಮತದಾರರಿಗೆ ಮತದಾನದ ದಿನಾಂಕದಂದು ಬೀದರ್ ಜಿಲ್ಲೆಯಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇನ್ನಿತರೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಾರಾಷ್ಟ್ರ, ರಾಜ್ಯದ ಮತದಾರರಿಗೆ derato Representation of People’s Act, 19510 ಸೆಕ್ಷನ್-133ಬಿ ಅಡಿಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ ಈ ಅವಕಾಶವನ್ನು ಉಪಯೋಗಿಸಿಕೊಳ್ಳಲು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಸೂಚಿಸಿ ಆದೇಶಿಸಿದೆ.