ನಿನ್ನೆಯ ಪಂದ್ಯದಲ್ಲಿ ಮಳೆ ಆತಂಕದ ನಡುವೆಯೂ ಗುಜರಾತ್ ಟೈಟನ್ಸ್ ತಂಡ ರಾಜಸ್ಥಾನ ರಾಯಲ್ಸ್ ಎದುರು ಕೇವಲ ಮೂರು ವಿಕೆಟ್ ಗಳಿಂದ ರೋಚಕ ಜಯ ಸಾಧಿಸಿದೆ. ಈ ಬಾರಿ ಐಪಿಎಲ್ ನಲ್ಲಿ ಸೋಲಿಲ್ಲದ ಸರದಾರರಾಗಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಗುಜರಾತ್ ಟೈಟನ್ಸ್ ಮೊದಲ ಸೋಲಿನ ರುಚಿ ತೋರಿಸಿದೆ.
ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ತಮ್ಮ ನೆಚ್ಚಿನ ಬ್ಯಾಟ್ಸ್ ಮ್ಯಾನ್ ಗಳಾದ ಹಿಟ್ಮ್ಯಾನ್ ರೋಹಿತ್ ಶರ್ಮಾ ಮತ್ತು ಕಿಂಗ್ ಕೊಹ್ಲಿ ಅವರ ಬ್ಯಾಟಿಂಗ್ ಅನ್ನು ಇಂದು ಕಣ್ತುಂಬಿಕೊಳ್ಳಲಿದ್ದಾರೆ. ಪ್ರತಿ ಐಪಿಎಲ್ ನಲ್ಲಿ ಈ ಎರಡು ತಂಡಗಳ ಕಾಳಗ ನೋಡಲು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ರೋಹಿತ್ ಶರ್ಮಾ ತಮ್ಮ ತವರಿನಲ್ಲಿ ಇಂದು ಯಾವ ರೀತಿ ಘರ್ಜಿಸಲಿದ್ದಾರೆ ಕಾದು ನೋಡಬೇಕಾಗಿದೆ.