HomeKarnatakaBIG NEWS: ಹತಾಶೆಯಿಂದ ಡಿ.ಕೆ.ಸಹೋದರರಿಂದ ಗೂಂಡಾಗಿರಿ; ಆರ್.ಅಶೋಕ್ ಆರೋಪ

BIG NEWS: ಹತಾಶೆಯಿಂದ ಡಿ.ಕೆ.ಸಹೋದರರಿಂದ ಗೂಂಡಾಗಿರಿ; ಆರ್.ಅಶೋಕ್ ಆರೋಪ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ಜೋರಾಗಿದೆ. ಡಿ.ಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಸಹೋದರರಿಬ್ಬರೂ ಗೂಂಡಾಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲಿನ ಸುಳಿವು ದೊರೆತಿರುವ ಹತಾಶೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದರೂ ಆತನನ್ನು ಬಂಧಿಸದೇ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿ.ಕೆ ಸಹೋದರರ ಮುಂದೆ ಅಷ್ಟೊಂದು ವೀಕ್ ಆಗಿದ್ದೇಕೆ? ಎಂದು ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular