HomeKarnatakaGOOD NEWS : ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ.!

GOOD NEWS : ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ.!

ಬೆಂಗಳೂರು : ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಸಮಾಧಾನಕರ ಸುದ್ದಿ. ರಾಜ್ಯದ ಹಲವೆಡೆ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 12 ರಿಂದ ಏ 14 ರವರೆಗೆ ಮತ್ತು 17 ಮತ್ತು 18 ರಂದು ಕರ್ನಾಟಕದಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಕೂಡ ನಾಳೆಯಿಂದ ಮಳೆಯಾಗುವ ಸಾಧ್ಯತೆಯಿದೆ. ಏ.12,15,16 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ರಾಯಚೂರು, ವಿಜಯಪುರ, ಗದಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ , ಕೊಡಗು, ಚಿಕ್ಕಮಗಳೂರು. ಮೈಸೂರು. ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular