HomeKarnatakaBIG NEWS: ಬಿ.ವೈ.ರಾಘವೇಂದ್ರ ಸೋಲು ಗ್ಯಾರಂಟಿ; ಚುನಾವಣೆ ಬಳಿಕ ವಿಜಯೇಂದ್ರ ರಾಜೀನಾಮೆ ಕೊಡ್ತಾರೆ; ಕೆ.ಎಸ್. ಈಶ್ವರಪ್ಪ...

BIG NEWS: ಬಿ.ವೈ.ರಾಘವೇಂದ್ರ ಸೋಲು ಗ್ಯಾರಂಟಿ; ಚುನಾವಣೆ ಬಳಿಕ ವಿಜಯೇಂದ್ರ ರಾಜೀನಾಮೆ ಕೊಡ್ತಾರೆ; ಕೆ.ಎಸ್. ಈಶ್ವರಪ್ಪ ಭವಿಷ್ಯ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ನನ್ನ ಗೆಲುವು ಖಚಿತ, ಬಿಜೆಪಿಯಲ್ಲಿ ರಾಜಕೀಯ ಶುದ್ಧೀಕರಣವಾಗಬೇಕು. ಅಪ್ಪ-ಮಕ್ಕಳ ಕೈಯಲ್ಲಿ ಬಿಜೆಪಿ ಸಿಲುಕಿಕೊಂಡಿದೆ ಎಂದರು.

ಈ ಬಾರಿ ಬಿ.ವೈ.ರಾಘವೇಂದ್ರ ಸೋಲು ಗ್ಯಾರಂಟಿ. ಚುನಾವಣೆ ಬಳಿಕ ಬಿ.ವೈ.ವಿಜಯೇಂದ್ರ ರಾಜೀನಾಮೆ ಕೊಡ್ತಾರೆ. ಉತ್ತಮವಾದ ಬಿಜೆಪಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular