HomeKarnatakaBIG NEWS: ಹಳ್ಳಿ ಹಳ್ಳಿಗಳಲ್ಲಿಯೂ ಬೆಂಬಲ ಸಿಗುತ್ತಿದೆ; ನನ್ನಷ್ಟು ಹಳ್ಳಿ ತಿರುಗೋರು ಯಾರೂ ಇಲ್ಲ ಎಂದ...

BIG NEWS: ಹಳ್ಳಿ ಹಳ್ಳಿಗಳಲ್ಲಿಯೂ ಬೆಂಬಲ ಸಿಗುತ್ತಿದೆ; ನನ್ನಷ್ಟು ಹಳ್ಳಿ ತಿರುಗೋರು ಯಾರೂ ಇಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಗದಗ: ನನಗೆ ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ ಎಂದು ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನನಗೆ ಹಳ್ಳಿಗಳ ಸಂಪರ್ಕ ಇದೆ. ಜನರ ಪ್ರೀತಿ ವಿಶ್ವಾಸ. ನನಗೂ ಪ್ರೀತಿ ಇದೆ. ಯಾವುದೇ ಸಮಯ ವ್ಯರ್ಥ ಮಾಡದೇ ಪ್ರಚಾರ ಮಾಡುತ್ತಿದ್ದೇನೆ. ಪ್ರತಿಯೊಂದು ಗ್ರಾಮಪಂಚಾಯಿತಿ ಮಟ್ಟಕ್ಕೆ ಹೋಗಿ ಪ್ರಚಾರ ಮಾಡುತ್ತಿದ್ದೇನೆ. ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಹಳ್ಳಿಹಳ್ಳಿಗಳಲ್ಲಿ ಪ್ರಚಾರವಾಗುತ್ತಿದೆ ಎಂದರು.

ಹಾವೇರಿ-ಗದಗ ಕ್ಷೇತ್ರದಲ್ಲಿ ಮೋದಿ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರದ ಬಗ್ಗೆ ಕೇಂದ್ರ ಪ್ರಚಾರ ಸಮಿತಿಯವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular