ಮಡಿಕೇರಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.
ಆನಂದ್ ಡೊಳ್ಳಿನ್ (42) ಮೃತ ದುರ್ದೈವಿ. ವಿರಾಜಪೇಟೆ ಡಿವೈ ಎಸ್ ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ವಸತಿ ಗೃಹದಲ್ಲಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.