ಮೈಸೂರು: 7 ವರ್ಷಗಳ ಬಳಿಕ ಪರಸ್ಪರ ಮುನಿಸು ಮರೆತು ಸಿಎಂ ಸಿದ್ದರಾಮಯ್ಯ ಇಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ ಸಿದ್ದರಾಮಯ್ಯ, ನಾನು ಶ್ರೀನಿವಾಸ್ ಪ್ರಸಾದ್ ಉತ್ತಮ ಸ್ನೇಹಿತರು. ಚುನಾವಣಾ ರಾಜಕಾರಣದಿಂದ ಶ್ರೀನಿವಾಸ್ ಪ್ರಸಾದ್ ನಿವೃತ್ತಿಯಾಗಿದ್ದಾರೆ. ಅವರ ಆರೋಗ್ಯ ವಿಚಾರಿಸುವ ನಿಟ್ಟಿನಲ್ಲಿ ಭೇಟಿಯಾಗಿದ್ದೆ ಎಂದು ತಿಳಿಸಿದರು.
ಹಿಂದೆ ನಾನು ಶ್ರೀನಿವಾಸ್ ಪ್ರಸಾದ್ ಒಂದೇ ಪಕ್ಷದಲ್ಲಿ ಇದ್ದೆವು. ನಂತರ ಕೆಲ ವಿಚಾರಗಳಿಂದ ಶ್ರೀನಿವಾಸ್ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾದರು. ಶ್ರೀನಿವಾಸ್ ಪ್ರಸಾದ್ ಜೊತೆ ರಾಜಕೀಯ ಮಾತನಾಡಿಲ್ಲ. ಆರೋಗ್ಯ ವಿಚಾರಿಸುವ ನಿಟ್ಟಿನಲ್ಲಿ ಭೇಟಿಯಾಗಿದ್ದೆ ಎಂದು ತಿಳಿಸಿದರು.
ಈ ವೇಳೆ ಮಾತನಾಡಿದ ವಿ.ಶ್ರೀನಿವಾಸ್ ಪ್ರಸಾದ್, ಸಿಎಂ ಸಿದ್ದರಾಮಯ್ಯ ನನ್ನನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಾವಿಬ್ಬರೂ ಮೊದಲಿನಿಂದ ಉತ್ತಮ ಸ್ನೇಹಿತರು ಎಂದು ಹೇಳಿದರು.