HomeKarnatakaBIG NEWS: ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವಕ್ಕಿಂತ ಅವರ ಪಕ್ಷ ಜೆಡಿಎಸ್ ಅಸ್ತಿತ್ವದ ಬಗ್ಗೆ ಮೊದಲು...

BIG NEWS: ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವಕ್ಕಿಂತ ಅವರ ಪಕ್ಷ ಜೆಡಿಎಸ್ ಅಸ್ತಿತ್ವದ ಬಗ್ಗೆ ಮೊದಲು ಭವಿಷ್ಯ ಹೇಳಲಿ; ಡಿಸಿಎಂ ಟಾಂಗ್

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಇಲ್ಲ ಎಂಬ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ ಎಂದು ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ದೇವೇಗೌಡರು ಎಷ್ಟು ಭವಿಷ್ಯ ಕಾಲವನ್ನು ನೋಡಿದ್ದಾರೋ ನಾನು ಅಷ್ಟೇ ಭವಿಷ್ಯ ಕಾಲವನ್ನು ನೋಡಿದ್ದೇನೆ. ಅವರಿಗೆ 60 ವರ್ಷಗಳ ರಾಜಕೀಯದ ಅನುಭವವಿದ್ದರೆ, ನನಗೆ 40 ವರ್ಷಗಳ ರಾಜಕಾರಣದ ಅನುಭವವಿದೆ. 136 +++ ಸೀಟುಗಳು ನಮ್ಮ ಸರ್ಕಾರದ ಬಳಿ ಇವೆ. ಅವರು ತಮ್ಮ ಪಕ್ಷ ಜೀವಂತವಾಗಿ ಇರುತ್ತದೆಯೋ ಇಲ್ಲವೋ ಎಂಬುದನ್ನು ಮೊದಲು ಹೇಳಲಿ ಎಂದರು.

ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗುತ್ತದೆಯೇ ಅಥವಾ ತನ್ನದೇ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಳ್ಳಲಿದೆಯೇ ಎಂಬುದರ ಬಗ್ಗೆ ಜನರಿಗೆ ತಿಳಿಸಿಲಿ. ಅವರೇ ಕಟ್ಟಿದ ಪಕ್ಷ ಹಾಗೂ ಅದರ ಬಗ್ಗೆ ಅವರ ನಿಷ್ಠೆಯನ್ನು ನಾನು ಪ್ರಶ್ನೆ ಮಾಡುವುದಿಲ್ಲ. ನಮ್ಮ ಸರ್ಕಾರದ ಅಸ್ತಿತ್ವ ಪಕ್ಕಕ್ಕಿರಲಿ, ಅವರ ಪಕ್ಷದ ಅಸ್ತಿತ್ವವೇ ಈಗ ಇಲ್ಲವಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular