ಏಪ್ರಿಲ್ 5 ರಂದು ತೆರೆಕಂಡಿದ್ದ ‘ಮ್ಯಾಟ್ನಿ’ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇಂದು ‘ಮ್ಯಾಟ್ನಿ’ ಚಿತ್ರದ ‘ಮಾತಲ್ಲಿ ದೊಣ್ಣೆ ವರಸೆ’ ಎಂಬ ಹಾಡೊಂದನ್ನು ಆನಂದ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಪೂರ್ಣಚಂದ್ರ ತೇಜಸ್ವಿ ಧ್ವನಿಯಾಗುವ ಮೂಲಕ ಸಂಗೀತ ಸಂಯೋಜನೆ ನೀಡಿದ್ದಾರೆ.
ಮನೋಹರ್ ಕಾಂಪಲ್ಲಿ ನಿರ್ದೇಶನದ ಈ ಚಿತ್ರದಲ್ಲಿ ಸತೀಶ್ ನೀನಾಸಂ, ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತು ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿದ್ದು, ಕೆಎಂ ಪ್ರಕಾಶ್ ಸಂಕಲನ, ಸುಧಾಕರ್ ರಾಜ್ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ. f3 ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪಾರ್ವತಿ ಎಸ್ ಗೌಡ ನಿರ್ಮಾಣ ಮಾಡಿದ್ದಾರೆ.