HomeKarnatakaBIG NEWS: ಸಿಎಂ ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ವಿ.ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಮಾಜಿ ಸಿಎಂ ಯಡಿಯೂರಪ್ಪ

BIG NEWS: ಸಿಎಂ ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ವಿ.ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಮಾಜಿ ಸಿಎಂ ಯಡಿಯೂರಪ್ಪ

ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದ್ದಾರೆ.

ಚಾಮರಾಜನಗರದಲ್ಲಿರುವ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ, ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ವಿಚಾರಿಸಿದರು. ಅಲ್ಲದೆ ಅವರ ಕಾಲಿನ ಗಾಯದ ಬಗ್ಗೆ ಮಾಹಿತಿ ಪಡೆದರು.

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ವಿ.ಶ್ರೀನಿವಾಸ್ ಪ್ರಸಾದ್, ಬಿಜೆಪಿಯಿಂದಲೂ ಅಂತರ ಕಾಯ್ದುಕೊಂಡಿದ್ದಾರೆ. ಅಲ್ಲದೇ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇಂದು ಮಾಜಿ ಸಿಎಂ ಯಡಿಯುರಪ್ಪ ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ತೆರಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ನಾನು ರಾಜಕೀಯದಿಂದಲೇ ನಿವೃತ್ತಿಯಾಗಿದ್ದೇನೆ. ಯಾವುದೇ ಚುನಾವಣಾ ಪ್ರಚಾರದಲ್ಲಾಗಲಿ, ರಾಜಕೀಯ ಕಾರ್ಯಕ್ರಮಗಳಲ್ಲಾಗಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular