ಮಂಡ್ಯ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಮಹಿಳೆಯರು ಮಾಜಿ ಸಿಎಂ ವಿರುದ್ಧ ಸಿಡಿದೆದ್ದಿದ್ದು, ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಕಿಡಿಕಾರಿರುವ ಮಹಿಳೆಯರು ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಪೋಸ್ಟರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕುಮಾರಸ್ವಾಮಿ, ಗ್ಯಾರಂಟಿ ಯೋಜನೆ ಟೀಕಿಸುವ ಬರದಲ್ಲಿ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ನಡೆದ ಚುನವಣಾ ಪ್ರಚಾರದ ವೇಳೆ ಮಾತನಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನ್ಡೆಸಿದ್ದರು. ಅಲ್ಲದೇ ಗ್ಯಾರಂಟಿ ಯೋಜನೆಯಿಂದಾಗಿ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.