ಬೆಂಗಳೂರು: ನಾನು ಮಹಿಳೆಯರನ್ನು ಅಪಮಾನಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಹೆಸರಲ್ಲಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ಮುಗ್ಧ ಜನರನ್ನು, ಮಹಿಳೆಯರನ್ನು ಗ್ಯಾರಂಟಿ ಯೋಜನೆಗಳ ಮೂಲಕ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೇನೆ. ಕಷ್ಟ ಎಂದು ಬಂದಾಗ ಆಶ್ರಯ ನೀಡಿದ್ದೇನೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಮಹಿಳೆಯರಿಗೆ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದೇನೆ. ಮಹಿಳೆಯರ ಕೂಗಿಗೆ ಸ್ಪಂದಿಸಿ ರಾಜ್ಯದಲ್ಲಿ ಸಾರಾಯಿ ನಿಷೇಧ ಮಾಡಿದ್ದೇನೆ. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವುದಿಲ್ಲ ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.