HomeKarnatakaಬಸ್ ನಲ್ಲಿ ಊರಿಗೆ ತೆರಳುವಾಗಲೇ ಹೃದಯಾಘಾತದಿಂದ ಮೃತಪಟ್ಟ ಪ್ರಯಾಣಿಕ

ಬಸ್ ನಲ್ಲಿ ಊರಿಗೆ ತೆರಳುವಾಗಲೇ ಹೃದಯಾಘಾತದಿಂದ ಮೃತಪಟ್ಟ ಪ್ರಯಾಣಿಕ

ಕಲಬುರಗಿ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಕಮಲಾಪುರ ಬಳಿ ನಡೆದಿದೆ.

ನಗರದ ಬಿದ್ದಾಪುರ ಕಾಲೋನಿ ನಿವಾಸಿ ವಿಜಯಕುಮಾರ್ ಶಿವಶರಣಪ್ಪ(45) ಮೃತಪಟ್ಟವರು ಎಂದು ಹೇಳಲಾಗಿದೆ. ಮೂಲತಃ ನಾಗನಹಳ್ಳಿಯವರಾದ ವಿಜಯಕುಮಾರ್ ಶಿವಶರಣಪ್ಪ ಜೆಸ್ಕಾಂನಲ್ಲಿ ಗುತ್ತಿಗೆ ಆಧಾರದಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಭಾಲ್ಕಿಯಲ್ಲಿರುವ ಸೋದರಿ ಮನೆಗೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಕಮಲಾಪುರ ಸಮೀಪ ಹೃದಯಘಾತವಾಗಿದೆ. ಕೂಡಲೇ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಮುಂದಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular