
ಕೊಪ್ಪಳ: 65 ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕುಕನೂರಿನಲ್ಲಿ ಮಾತನಾಡಿದ ಅವರು, ನನ್ನನ್ನು ಹಣಕಾಸು ಸಚಿವರನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರಿದ್ದೇನೆ. ಹಣಕಾಸು ಮಂತ್ರಿ ಆದರೆ ಅನೇಕ ಜನಪ್ರಿಯ ಕಾರ್ಯಕ್ರಮಗಳ ಜಾರಿಗೆ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೊಳಿಸಲು ಬಜೆಟ್ ನಲ್ಲಿ ಚಿಂತಿಸಿದ್ದೆ. ಮುಂದಿನ ದಿನಗಳಲ್ಲಿ 65 ವರ್ಷ ಮೇಲ್ಪಟ್ಟ ಪುರುಷರಿಗೆ ಉಚಿತ ಪ್ರಯಾಣ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

 
		 
		 
		 
		 Loading ...
 Loading ... 
		 
		 
		