ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಏಪ್ರಿಲ್ 15 ) ವಿಚಾರಣೆ ನಡೆಸಲಿದೆ.
ಅಬಕಾರಿ ಹಗರಣದಲ್ಲಿ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಕೇಜ್ರಿವಾಲ್ ಗುರುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ದೆಹಲಿ ಮುಖ್ಯಮಂತ್ರಿ ಸುಪ್ರೀಂ ಕೋರ್ಟ್ ನಲ್ಲಿ ತುರ್ತು ವಿಚಾರಣೆಗಾಗಿ ವಿನಂತಿಸಿದರು ಆದರೆ ಸುಪ್ರೀಂಕೋರ್ಟ್ ಏ.15 ಕ್ಕೆ ವಿಚಾರಣೆ ನಿಗದಿಪಡಿಸಿದೆ.
ಯಾವುದೇ ವಿಶೇಷ ಪೀಠವನ್ನು ರಚಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಮತ್ತು ಕೇಜ್ರಿವಾಲ್ ಅವರ ಮನವಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಮೇಲ್ ಮಾಡುವಂತೆ ಕೇಳಿತ್ತು.
ಈ ಮೊದಲು ತಮ್ಮ ಬಂಧನವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸ್ವರಣಾ ಕಾಂತ ಶರ್ಮಾ, ಇಡಿ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾ ಮಾಡಿದ್ದರು. ಇದಾದ ಒಂದು ದಿನದ ನಂತರ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಏಪ್ರಿಲ್ 15 ) ವಿಚಾರಣೆ ನಡೆಸಲಿದೆ.