HomeKarnatakaRain in Karnataka : ಏ.18 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ 'ಮಳೆ' ; 'ಹವಾಮಾನ...

Rain in Karnataka : ಏ.18 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ಮಳೆ’ ; ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ರಾಜ್ಯದ ಹಲವೆಡೆ ಏ.18 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಏಪ್ರಿಲ್ 18 ರಿಂದ ಕರ್ನಾಟಕದಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಏ.18ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವಿಜಯಪುರ, ಬಳ್ಳಾರಿ, , ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ 2 ದಿನದಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ತರೀಕೆರೆ, ಶೃಂಗೇರಿ, ಬಾಳೆಹೊನ್ನೂರು ಸೇರಿದಂತೆ ಹಲವು ಕಡೆ ಮಳೆಯಾಗುತ್ತಿದೆ. ಹಾಗೂ ಆಗುಂಬೆಯಲ್ಲಿ ಕೂಡ ಸಾಧಾರಣ ಮಳೆಯಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular