ಬೆಂಗಳೂರು : ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ಕಿಡಿಕಾರಿ ನೋಟಿಸ್ ನೀಡಿದೆ. ಹೆಚ್ಡಿಕೆಗೆ ರಾಜ್ಯ ಮಹಿಳಾ ಆಯೋಗ (ನೋಟೀಸ್ ಜಾರಿ ಮಾಡಿದ್ದು ಒಂದು ವಾರದೊಳಗೆ ಅವರು ಆಯೋಗದ ಎದುರು ಹಾಜರಾಗಿ ಸಮಜಾಯಿಷಿ ನೀಡಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧುರಿ ಹೇಳಿದ್ದಾರೆ.
ಕುಮಾರಸ್ವಾಮಿ ಒಬ್ಬ ಹಿರಿಯ ರಾಜಕಾರಣಿ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ ಮಹಿಳೆಯರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ. ರಾಜಕೀಯ ಲಾಭಕ್ಕೆ ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರಲ್ಲ, ಅವರಿಗೆ ನೋಟೀಸ್ ನೀಡಲಾಗಿದೆ ಎಂದರು. ಅಕ್ಕ ಒಂದು ಮಾತ್ರೆ ಮತ್ತು ಪೆಗ್ ತಗೊಂಡು ಮಲ್ಕೊಂಬಿಡ್ತಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹೇಳಿಕೆ ನೀಡಿರುವ ಸಂಜಯ ಪಾಟೀಲ್ ಗೂ ನೋಟೀಸ್ ಜಾರಿಮಾಡಲಾಗಿದೆ ಎಂದರು.