ಬೆಂಗಳೂರು : ಬೆಂಗಳೂರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.93 ಕೋಟಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಪೊಲೀಸರು ಹಣ ವಶಪಡಿಸಿಕೊಂಡಿದ್ದಾರೆ. ಎಟಿಎಂಗೆ ಹಣ ಸಾಗಿಸುವ ಏಜೆನ್ಸಿ ವಾಹನದಲ್ಲಿ 2.93 ಕೋಟಿ ಕೊಂಡೊಯ್ಯಲಾಗಿತ್ತು. ಬಂದೂಕು ಸಹಿತ ಸೆಕ್ಯೂರಿಟಿ ಗಾರ್ಡ್ ಇಲ್ಲದೇ ಹಣ ಸಾಗಿಸಲಾಗುತ್ತಿತ್ತು.
ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ ಹಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆ ಪೊಲೀಸರು ಹಣ ಸೀಜ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಹಣದ ಬಗ್ಗೆ ಚುನಾವಣಾ ಆಯೋಗ, ಐಟಿ ಇಲಾಖೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ