HomeIndiaBREAKING: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ಅರೆಸ್ಟ್

BREAKING: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ಅರೆಸ್ಟ್

ಮುಂಬೈ: ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯೊಂದರಲ್ಲಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಮಂಗಳವಾರ ಗುಜರಾತ್‌ನ ಭುಜ್‌ನಿಂದ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಅಪರಾಧ ವಿಭಾಗದ ಮೂಲಗಳ ಪ್ರಕಾರ, ಬಂಧಿತ ಆರೋಪಿಗಳ ಹೆಸರು ವಿಕ್ಕಿ ಗುಪ್ತಾ(24) ಮತ್ತು ಸಾಗರ್ ಪಾಲ್(21). ಇಬ್ಬರೂ ಆರೋಪಿ ಶೂಟರ್‌ಗಳು ಬಿಹಾರದ ಪಶ್ಚಿಮ ಚಂಪಾರಣ್‌ ನವರು. ಕಳ್ಳತನ, ಚೈನ್ ಸ್ನ್ಯಾಚಿಂಗ್‌ನಂತಹ ಪ್ರಕರಣಗಳು ಈಗಾಗಲೇ ಅವರ ವಿರುದ್ಧ ದಾಖಲಾಗಿವೆ.

ಇದಕ್ಕೂ ಮೊದಲು, ಮುಂಬೈ ಪೊಲೀಸರು ಭಾನುವಾರ(ಏಪ್ರಿಲ್ 14) ನಟನ ನಿವಾಸದ ಹೊರಗೆ ಗುಂಡು ಹಾರಿಸಿದ ಇಬ್ಬರು ಶಂಕಿತರ ಚಿತ್ರಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಬಿಡುಗಡೆ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬೈನ ಬಾಂದ್ರಾ ಪೊಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 307 ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸಲ್ಮಾನ್ ಖಾನ್ ಅವರ ಭದ್ರತಾ ಸಿಬ್ಬಂದಿ ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular