HomeKarnatakaBIG NEWS : ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ ; ಕೋಲಾರ, ಮಂಡ್ಯದಲ್ಲಿ ಭರ್ಜರಿ...

BIG NEWS : ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ ; ಕೋಲಾರ, ಮಂಡ್ಯದಲ್ಲಿ ಭರ್ಜರಿ ಪ್ರಚಾರ..!

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಮಂಡ್ಯ ಹಾಗೂ ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ.

ಹೌದು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಕೋಲಾರ ಮತ್ತು ಮಂಡ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಕೋಲಾರ ಮತ್ತು ಮಂಡ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ. ನಂತರ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿಯೂ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ.

ಬುಧವಾರ ರಾಜ್ಯಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಮಧ್ಯಾಹ್ಮ ಮಂಡ್ಯ ಜಿಲ್ಲೆಗೆ ತೆರಳಲಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧವಾಗಿ ಮಾಜಿ ಸಿಎಂ H.D  ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ, ಈ ಮೂಲಕ ಮಂಡ್ಯದಲ್ಲಿ ಭಾರಿ ಪೈಪೋಟಿ ನಡೆಸಲಿದೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular